SHIVAMOGGA LIVE NEWS | 18 JULY 2024
ಸುದ್ದಿಯ ಮುಂದಿನ ಭಾಗ ಕೆಳಗಿದೆ
RAINFALL NEWS : ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ (HOLIDAY).
ಸದ್ಯ ಶಿಕಾರಿಪುರ ತಾಲೂಕು ಹೊರತುಪಡಿಸಿದರೆ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೊಸನಗರ, ಸಾಗರ, ತೀರ್ಥಹಳ್ಳಿ ಮತ್ತು ಸೊರಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದರಿಂದ ನಿನ್ನೆಯೇ ರಜೆ ಘೋಷಿಸಲಾಗಿತ್ತು. ಶಿವಮೊಗ್ಗ, ಭದ್ರಾವತಿ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಮಳೆ ಪ್ರಮಾಣ ತಗಿದ್ದರಿಂದ ರಜೆ ಘೋಷಣೆ ಆಗಿರಲಿಲ್ಲ. ಆದರೆ ಕಳೆದ ರಾತ್ರಿಯಿಂದ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ. ಅಲ್ಲದೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಪ್ರಕಟಿಸಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

