ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮುಂದಿನ ಐದು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣದ ಜೊತೆಗೆ ಶುಭ್ರ ಆಕಾಶವೂ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಕ್ಷೀಣಿಸಿದ ಕಾರಣ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಉತ್ತರ ಕರ್ನಾಟಕದಲ್ಲಿ 33ರಿಂದ 37 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮುಂಗಾರು ಬಲಗೊಳ್ಳಲು ಪೂರಕವಾದ ವಾತಾವರಣವಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಮಾರುತಗಳು ಪ್ರಬಲಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ಹಾಗಾಗಿ ಸದ್ಯಕ್ಕೆ ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ. ಸಾರ್ವಜನಿಕರು ಹವಾಮಾನ ವೈಪರೀತ್ಯಗಳಿಗೆ ಸಿದ್ಧರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ » ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

