ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
RAINFALL NEWS : ರಾಜ್ಯದಲ್ಲಿ ಮುಂಗಾರು (Monsoon) ಮಳೆ ಬಿರುಸು ಪಡೆಯುತ್ತಿದೆ. ಇನ್ನೆರಡು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೆಲ ದಿನದ ವಿರಾಮದ ಬಳಿಕ ಮತ್ತೆ ರಾಜ್ಯಾದ್ಯಂತ ಮುಂಗಾರು ವ್ಯಾಪಿಸಿಕೊಂಡಿದೆ. ಬುಧವಾರ ಮತ್ತು ಗುರುವಾರ ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಈಗ ಮತ್ತಷ್ಟು ಕೂಲ್, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಬುಧವಾರದಿಂದ ಮೂರು ದಿನ ರಾಜ್ಯಾದ್ಯಂತಮ ಮಳೆಯಾಗಲಿದೆ. ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಸುರಿಯಲಿದೆ. ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್, ರಾಕೆಟ್