ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RAINFALL NEWS : ವಾಡಿಕೆಗಿಂತಲು ಮೊದಲೆ ಕೇರಳ ಪ್ರವೇಶಿಸಿರುವ ಮಾನ್ಸೂನ್ (Monsoon) ಇವತ್ತು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ. ಆರಂಭದಲ್ಲಿ ದುರ್ಬಲವಾಗಿದ್ದ ಮುಂಗಾರು ಇನ್ಮುಂದೆ ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.2ರಂದು ಕರಾವಳಿಗೆ ಮಾನ್ಸೂನ್ ಮಾರುತುಗಳ ಪ್ರವೇಶಿಸಲಿದ್ದು, ಮುಂದೆ ರಾಜ್ಯದ ವಿವಿಧೆಡೆ ಆವರಿಸಿಕೊಳ್ಳಲಿದೆ. ರಾಜ್ಯದಲ್ಲಿ ಶನಿವಾರದಿಂದಲೆ ಉತ್ತಮ ಮಳೆಯಾಗಲಿದೆ. ಬೆಂಗಳೂರು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಜೂ.2ರಂದು ಹಾಸನ, ಮಂಡ್ಯ, ಕೊಡಗು, ಮೈಸೂರಿನಲ್ಲಿ ಜೋರು ಮಳೆಯ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ತಾಪಮಾನ? ಮಳೆ ಆಗಲಿದೆಯಾ? ಇಲ್ಲಿದೆ ಡಿಟೇಲ್ಸ್
ಜೂ.3ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.