ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
RAIN NEWS, 29 OCTOBER 2024 : ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ನ.1ರಿಂದ ರಾಜ್ಯದ ಕೆಲವೆಡೆ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಮಳೆಯಾಗಲಿದೆ?
ನ.1ರಿಂದ ಎರಡು ದಿನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ನ.2ರಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ರಾಜ್ಯದಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆ
ಇನ್ನು, ಅ.1ರಿಂದ 28ರವರೆಗೆ ರಾಜ್ಯಾದ್ಯಂತ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 120 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 181 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇ.51 ಅಧಿಕ ವರ್ಷಧಾರೆಯಾಗಿದೆ. ಜೂ.1ರಿಂದ ಸೆ.30ರವರೆಗೆ ರಾಜ್ಯದಲ್ಲಿ 978 ಮಿಮೀ ಮಳೆಯಾಗಿದೆ.
ಇದನ್ನೂ ಓದಿ » ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ