ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 9 OCTOBER 2024 : ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ರಾತ್ರಿ ಪೂರ್ತಿ ಮಳೆ (Rain) ಅಬ್ಬರಿಸಿದೆ. ಇನ್ನೊಂದೆಡೆ ಇವತ್ತು ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಆರಂಭವಾಯಿತು. ರಾತ್ರಿ ಗುಡುಗು ಸಹಿತ ಹಿಂಗಾರು ಅಬ್ಬರ ಜೋರಾಗಿತ್ತು. ವಿವಿಧೆಡೆ ರಸ್ತೆ ಮೇಲೆ ಭಾರಿ ಪ್ರಮಾಣ ನೀರು ಹಿರಿಯುತ್ತಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇನ್ನು, ಜಿಲ್ಲೆಯ ವಿವಿಧೆಡೆಯ ಭಾರಿ ಮಳೆ ಅಬ್ಬರಿಸಿದೆ.

ಇವತ್ತು ಕೂಡ ಮಳೆ ಅಬ್ಬರ
ಇಂದು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೂರು ಗಂಟೆಯಲ್ಲಿ ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ದಾವಣಗೆರೆ, ದಕ್ಷಿಣ ಕನ್ನಡ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗ ಬೆಳಗ್ಗೆ 7 ಗಂಟೆ ಹೊತ್ತಿಗೆ ಅಲರ್ಟ್ ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಜನಶತಾಬ್ದಿ ರೈಲು ಹತ್ತುವ ಆತುರ, ಜಾರಿ ಬಿದ್ದು ತಿರುಚಿತು ವ್ಯಕ್ತಿಯ ಕಾಲು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





