ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರೆದಿದೆ. ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ (Rain Alert) ಪ್ರಕಟಿಸಲಾಗಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ರಾಜ್ಯ ಉತ್ತರ ಮತ್ತು ದಕ್ಷಿಣ ಒಳನಾಡು, ಮಲೆನಾಡು ಭಾಗಕ್ಕೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಅಲರ್ಟ್ ಇಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮೇಲ್ಮೈ ಗಾಳಿಯು ತೀವ್ರವಾಗಿರಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?
Rain Alert in Shivamogga
