ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ, 26 JULY 2024 : ಜಿಲ್ಲೆಯಾದ್ಯಂತ ಪುನಃ ಮಳೆ (rain) ಅಬ್ಬರಿಸಲು ಆರಂಭಿಸಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಇವತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಇರುವ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿಪರೀತ ಗಾಳಿಯಿಂದ ಭೀತಿ
ಜೋರು ಮಳೆಯ ಜೊತೆಗೆ ಮೇಲ್ಮೈ ಗಾಳಿ ವಿಪರೀತವಾಗಿದೆ. ಕಳೆದ ರಾತ್ರಿ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ವಿಪರೀತ ಗಾಳಿ ಬೀಸಿದೆ. ಉಳಿದ ತಾಲೂಕುಗಳಲ್ಲಿ ಗಾಳಿ ಜೋರಿತ್ತು. ಅಲ್ಲಲ್ಲಿ ಮರಗಳ ರೆಂಬೆ, ಕೊಂಬೆಗಳು ಬಿದ್ದಿವೆ. ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. ಗಾಳಿಯಿಂದ ಜನರಲ್ಲಿ ಆತಂಕ ಮೂಡಿದೆ.
ಜಿಲ್ಲೆಯಲ್ಲಿ ತಗ್ಗಿದ ತಾಪಮಾನ
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ತಾಪಮಾನ ಸಂಪೂರ್ಣ ತಗ್ಗಿದೆ. ಥಂಡಿ ವಾತಾವರಣವಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 26 ಡಿಗ್ರಿ,ಕನಿಷ್ಠ 22 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ಸ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.