ರಾತ್ರಿ ಇಡೀ ಅಬ್ಬರಿಸಿದ ವರುಣ, ಇವತ್ತು ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIMOGA, 27 JULY 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (rain) ಅಬ್ಬರ ಮುಂದುವರೆದಿದೆ. ಕಳೆದ ರಾತ್ರಿ ವಿವಿಧೆಡೆ ಗಾಳಿ ಸಹಿತ ಜೋರು ಮಳೆಯಾಗಿದೆ. ಇವತ್ತೂ ಜೋರು ಮಳೆ ಸಾಧ್ಯತೆ ಇದೆ. ಹಾಗಾಗಿ ತೀರ್ಥಹಳ್ಳಿ, ಸಾಗರ, ಹೊಸನಗರ ಮತ್ತು ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆರೆಂಜ್‌ ಅಲರ್ಟ್‌ ಘೋಷಣೆ

ಶಿವಮೊಗ್ಗ ಜಿಲ್ಲೆಗೆ ಇವತ್ತು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಆರೆಂಜ್‌ ಅಲರ್ಟ್‌ ಇದ್ದರೆ ಭಾರಿ ಮಳೆಯಾಗಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ಭಾಗದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಭಾರಿ ಮೇಲ್ಮೈ ಗಾಳಿ ಇರಲಿದೆ ಎಂದು ಅಲರ್ಟ್‌ನಲ್ಲಿ ಪ್ರಕಟಿಸಲಾಗಿದೆ.

rain-in-shimoga-city-near-vidyanagara-flyover

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನಿರಂತರ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಇವತ್ತು ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಇನ್ನೂ ಬೆಂಗಳೂರು ತಲುಪಿಲ್ಲ, ನಡುರಾತ್ರಿ ಲಾಸ್ಟ್‌ ಸ್ಟಾಪ್‌ ಮುಟ್ಟಿದ ಇಂಟರ್‌ಸಿಟಿ

Leave a Comment