ರಾಜ್ಯಾದ್ಯಂತ ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ, ಎಲ್ಲೆಲ್ಲಿ? ಯಾವಾಗ ಮಳೆಯಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAINFALL NEWS, 15 OCTOBER 2024 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇನ್ನು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್‌ 17ರವರೆಗೆ ಭಾರಿ ಮಳೆಯಾಗಲಿದೆ.

ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ?

ಅಕ್ಟೋಬರ್‌ 15 : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್‌ 16 : ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೋಲಾರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

PACE-COLLEGE-ADVT

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೂಲ್‌ ಕೂಲ್‌ ವಾತಾವರಣ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಅಕ್ಟೋಬರ್‌ 17 : ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಅಕ್ಟೋಬರ್‌ 18 : ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment