ರಾಜ್ಯಾದ್ಯಂತ ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ, ಎಲ್ಲೆಲ್ಲಿ? ಯಾವಾಗ ಮಳೆಯಾಗಲಿದೆ?

RAINFALL NEWS, 15 OCTOBER 2024 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇನ್ನು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್‌ 17ರವರೆಗೆ ಭಾರಿ ಮಳೆಯಾಗಲಿದೆ. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ?

ಅಕ್ಟೋಬರ್‌ 15 : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್‌ 16 : ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೋಲಾರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

PACE-COLLEGE-ADVT

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೂಲ್‌ ಕೂಲ್‌ ವಾತಾವರಣ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಅಕ್ಟೋಬರ್‌ 17 : ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಅಕ್ಟೋಬರ್‌ 18 : ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

rain-in-shimoga-city-near-NCC-Office.

Leave a Comment