ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ತಗ್ಗಲಿದೆ ಮಳೆ, ಮುಂಗಾರು ಪ್ರವೇಶ ಸ್ವಲ್ಪ ತಡ, ಯಾವಾಗ?

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ (ಮೇ 28ರ ಬೆಳಿಗ್ಗೆವರೆಗೆ) ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಉತ್ತರ ಕನ್ನಡದ ಒಳಭಾಗದ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಸಂಜೆ ನಂತರ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ. ಆದರೆ, ಮೇ 28ರಿಂದ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿಯುವ ಲಕ್ಷಣಗಳಿವೆ.

Shivamogga-Weather-Report

ಉತ್ತರ ಹಾಗೂ ದಕ್ಷಿಣ ಒಳನಾಡು

ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣ ಇರಲಿದೆ. ಒಳನಾಡಿನಲ್ಲಿಯೂ ಮೇ 28 ಮತ್ತು 29ರಿಂದ ಮಳೆ ಕಡಿಮೆಯಾಗುವ ಮುನ್ಸೂಚನೆ ಇದೆ.

ಜೂನ್ 5ಕ್ಕೆ ಮುಂಗಾರು ಪ್ರವೇಶ

ನಿರೀಕ್ಷೆ ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ ಜೂನ್ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದರೆ, ಈ ಬಾರಿ ‘ಎಲ್ನಿನೋ’ ಪ್ರಭಾವ ಇರುವುದರಿಂದ ಮುಂಗಾರು ಮಳೆ ಆರಂಭದಲ್ಲಿ ಸ್ವಲ್ಪ ದುರ್ಬಲವಾಗಿರುವ ಸಾಧ್ಯತೆಗಳು ಹೆಚ್ಚಿವೆ.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp