ಶಿವಮೊಗ್ಗ ಜಿಲ್ಲೆಯ ಹವಾಮಾನ; ಇವತ್ತು ವಿವಿಧೆಡೆ ಬಿಸಿಲು, ಮೋಡ, ಮಳೆ, ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

ಹವಾಮಾನ ವರದಿ: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗಿತ್ತು. ಇದರಿಂದ ಜಿಲ್ಲೆಯ ತಾಪಮಾನ ತುಸು ತಗ್ಗಿತ್ತು. ಈಗ ಪುನಃ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ (weather).

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲಿನ ಅಬ್ಬರ ಇರಲಿದೆ. ಮೈ ಸುಡುವ ಬಿಸಿಲಿನ ಮಧ್ಯೆ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯು ಇದೆ ಎಂದು ಆಕ್ಯು ವೆದರ್‌ ವರದಿಯಲ್ಲಿ ತಿಳಿಸಲಾಗಿದೆ.

Shivamogga-Weather-Report

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ: ಜಿಲ್ಲಾ ಕೇಂದ್ರದಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ ಮೋಡದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಅಬ್ಬರ ಇರುವ ಸಾಧ್ಯತೆ ಇದೆ.

ತೀರ್ಥಹಳ್ಳಿ: ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಮುಸುಕಿದ ವಾತಾವರಣ. ಬಿಸಿಲು ಪ್ರಖರತೆ.

Shivamogga-Weather-Report

ಹೊಸನಗರ: ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡದ ವಾತಾವರಣ, ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ : ಆಯನೂರು ಸಂತೆ; ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ಬಂದವರಿಂದ ಮಾಂಗಲ್ಯ ಸರ ಅಪಹರಣ

ಸಾಗರ: ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಆಗಾಗ ಬಿಸಿಲು ಮತ್ತು ಮೋಡ ಇರುವ ಸಾಧ್ಯತೆ ಇರಲಿದೆ.

JNN College of Engineering Admissions started

ಇದನ್ನೂ ಓದಿ : ಯಶವಂತಪುರ – ತಾಳಗುಪ್ಪ ಮಧ್ಯೆ ಬೇಸಿಗೆ ವಿಶೇಷ ರೈಲು, ವೇಳಾಪಟ್ಟಿ ಪ್ರಕಟ

ಸೊರಬ: ಇಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದೆ. ದಿನವಿಡೀ ಬಹುತೇಕ ಬಿಸಿಲಿನಿಂದ ಕೂಡಿದ ವಾತಾವರಣ ಇರಲಿದೆ.

ಶಿಕಾರಿಪುರ: ತಾಲೂಕಿನಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಭಾಗಶಃ ಮೋಡ ಇರಲಿದೆ. ಬಿಸಿಲು ಕೂಡ ಇರಲಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment