ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಏನಿದೆ ಅಲರ್ಟ್‌? ಇಲ್ಲಿದೆ ರಿಪೋರ್ಟ್‌

ಹವಾಮಾನ ವರದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿಯು ಮಳೆ ಪ್ರಮಾಣ ತಗ್ಗಿದೆ. ಭಾನುವಾರ ಜಿಲ್ಲೆಯ ವಿವಿಧೆಡೆ ಕೆಲವು ಹೊತ್ತು ಜೋರು ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. (Weather)

ಇವತ್ತೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಕೆಲವು ಹೊತ್ತು ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್‌ ಪ್ರಕಟವಾಗಿದೆ. ಕರಾವಳಿ ಜಿಲ್ಲೆಗಳೊಂದಿಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯಾಗುವ ಅಂದಾಜಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ರಾಗಿಗುಡ್ಡದಲ್ಲಿ 17 ಗಣಪತಿಗಳ ಅದ್ಧೂರಿ ಮೆರವಣಿಗೆ, ಎಲ್ಲೆಲ್ಲೂ ಬಿಗಿ ಬಂದೋಬಸ್ತ್‌, ಹೇಗಿದೆ ರಾಜಬೀದಿ ಉತ್ಸವ?

WEATHER-REPORT-SHIMOGA-

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment