ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಎಷ್ಟೊತ್ತಿಗೆ ಮಳೆಯಾಗಬಹುದು?

WEATHER REPORT, 10 OCTOBER 2024 : ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಇದರಿಂದ ವಾತಾವರಣ ತುಸು ತಂಪೆನಿಸಿದರು ತಾಪಮಾನ ಕಡಿಮೆಯಾಗಿಲ್ಲ. ಧಗೆ ಮುಂದುವರೆದಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕಡವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುವ ಸಂಭವವಿದೆ.

Nanjappa Hospital Advertisement

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆಗೆ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ » ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತ, ಸ್ಥಳಕ್ಕೆ ಸಂಸದ ಭೇಟಿ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment