ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಂಪು ತಂಪಾಗಿದೆ ಇಳೆ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನರ್ವಸು ಮಳೆ ಅಬ್ಬರಿಸುವ ನಿರೀಕ್ಷೆಯಲ್ಲಿದ್ದ ರೈತರು ಈಗ ಚಿಂತೆಗೀಡಾಗಿದ್ದಾರೆ. ಇದರಿಂದ ಜಲಾಶಯಗಳ ಒಳ ಹರಿವು ತಗ್ಗಿದೆ. ಇನ್ನು, ಜಿಲ್ಲೆಯಲ್ಲಿ ತಂಪು ವಾತಾವರಣ ಮುಂದುವರೆದಿದೆ. ಶಿವಮೊಗ್ಗದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಶಿವಮೊಗ್ಗ ತಾಲೂಕಿನಲ್ಲಿ ಬೆಳಗ್ಗೆ 7 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 11ಕ್ಕೆ 27.9 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 48.7 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಸಂಜೆ 5 ಗಂಟೆಗೆ 25.1 ಡಿಗ್ರಿ, ರಾತ್ರಿ 8 ಗಂಟೆಗೆ 22.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ. ಹೊಸನಗರ, ಸಾಗರ, ಶಿಕಾರಿಪುರ ಮತ್ತು ಸೊರಬದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ BSNL ಕಚೇರಿಗೆ ಸಂಸದ ರಾಘವೇಂದ್ರ ಭೇಟಿ, ಮಹತ್ವದ ಮೀಟಿಂಗ್‌, ಯಾವೆಲ್ಲ ವಿಷಯ ಚರ್ಚೆಯಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment