ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಹೇಗಿದೆ ತಾಪಮಾನ?

WEATHER NEWS, 11 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಆದರೆ ತಾಪಮಾನ ಮಾತ್ರ ತಗ್ಗಿಲ್ಲ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ?

♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಂಭವವಿದೆ.

♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆಯಿಂದ ಸಂಜೆವರೆಗೆ ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ರಾತ್ರಿವರೆಗೆ ಆಗಾಗ ಸಾಧರಣ ಮಳೆಯ ಸಾಧ್ಯತೆ ಇದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment