ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟೊತ್ತಿಗೆ ಮಳೆಯಾಗುತ್ತೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
WEATHER NEWS, 12 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇವತ್ತೂ ಜಿಲ್ಲೆಯಲ್ಲಿ ಗುಡಗು ಸಹಿತ, ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯಲ್ಲೋ ಅಲರ್ಟ್‌ ಕೂಡ ಘೋಷಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಹೇಗಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಮಳೆ ಅಲರ್ಟ್‌ ಪ್ರಕಟಿಸಲಾಗಿದೆ.

ತೀರ್ಥಹಳ್ಳಿಯಲ್ಲಿ ತಾಪಮಾನ ಗರಿಷ್ಠ 29 ಡಿಗ್ರಿ , ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ಇದೆ. ಮಧ್ಯಾಹ್ನದ ಬಳಿಕ ಸಾಧಾರಣದಿಂದ ಜೋರು ಮಳೆಯ ಮುನ್ಸೂಚನೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ , ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಭದ್ರಾವತಿಯ ಯರೇಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ

Leave a Comment