ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ವಾತಾವರಣ, ಇವತ್ತು ಇದ್ಯಾ ಮಳೆ ಅಲರ್ಟ್‌? ಇಲ್ಲಿದೆ ಡಿಟೇಲ್ಸ್‌

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಶುರುವಾಗಿದೆ. ರಾತ್ರಿ ವೇಳೆ ತಂಪೇರುತ್ತಿದ್ದು ತಾಪಮಾನ ಇಳಿಕೆಯಾಗಿದೆ. ಕಳೆದ ಕೆಲ ದಿನ ಬೇಸಿಗೆಯಂತಹ ಬಿಸಿಲಿತ್ತು. ಎರಡು ದಿನದ ಮಳೆ ಬೆನ್ನಿಗೆ ವಾತಾವರಣ ಸಂಪೂರ್ಣ ಬದಲಾಗಿದೆ (weather).

ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜಿಲ್ಲೆಗೆ ಮಳೆ ಅಲರ್ಟ್‌ ಇದೆ. ಚಿಕ್ಕಮಗಳೂರಿಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆ ಸಾಧ್ಯತೆ ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಕೆಲಸ ಹುಡುಕುತ್ತಿರುವವರೆ ಹುಷಾರ್‌, ಮುಂದೆ ನಿಮಗು ಆಗಬಹುದು ಇಂಥಾ ಮೋಸ, ಏನದು?

weather

Leave a Comment