ಶಿವಮೊಗ್ಗದಲ್ಲಿ ಮಳೆ ಮಾಯ, ತಾಪಮಾನ ತುಸು ಹೆಚ್ಚಳ, ಇವತ್ತು ಹೇಗಿರುತ್ತೆ ಹಾವಾಮಾನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಹವಾಮಾನ ವರದಿ: ಆರಂಭದಲ್ಲಿ ಅಬ್ಬರಿಸಿದ್ದ ಪುನರ್ವಸು ಮಳೆ ತಣ್ಣಗಾಗಿದೆ. ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಮಳೆಗಾಲವೋ ಬೇಸಿಗೆಯೋ ಎಂಬ ಅನುಮಾನ ಮೂಡುವಷ್ಟು ವಾತಾವರಣದಲ್ಲಿ ಬದಲಾವಣೆ ಆಗಿದೆ. ಬಿಸಿಲು ಮತ್ತು ತಾಪಮಾನ ಏರಿಕೆಯಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇವತ್ತು ಮಳೆ ಆಗಬಹುದಾ?

ರಾಜ್ಯದ ಯಾವುದೇ ಜಿಲ್ಲೆಗಳಲ್ಲು ಇವತ್ತು ಜೋರು ಮಳೆಯ ಸಾಧ್ಯತೆ ಇಲ್ಲ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯಲ್ಲು ಮಳೆ ಇರುವುದಿಲ್ಲ. ಮೋಡ ಕವಿದ ವಾತಾರಣ ಇರುವ ಸಾದ್ಯತೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಅಥವಾ ಚದುರಿದ ಹಾಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

WEATHER-REPORT-SHIMOGA-

ತಾಲೂಕುವಾರು ತಾಪಮಾನದ ವಿವರ

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿ ಗರಿಷ್ಠ 28 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ಹೊಸನಗರ ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ಸಾಗರ ಗರಿಷ್ಠ 28 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ಸೊರಬ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ಶಿಕಾರಿಪುರ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!