NEWS HIGHLIGHTS
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report)
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.ಗುರುವಾರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. ಶುಕ್ರವಾರವು ಇದೇ ರೀತಿ ಮಳೆ ಮುಂದುವರೆಯುವ ಸಂಭವವಿದೆ. ಇದರಿಂದಾಗಿ ತಾಪಮಾನ ಕೂಡ ತುಸು ಇಳಿಕೆಯಾಗಿದ್ದು, ಥಂಡಿ ವಾತಾವರಣ ಇದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೃಗಶಿರ ಮಳೆ ಅಬ್ಬರ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

