ಶಿವಮೊಗ್ಗ ಲೈವ್
ಹವಾಮಾನ ವರದಿ: ಕರ್ನಾಟಕದ ವಿವಿಧೆಡೆ ಇನ್ನೆರಡು ದಿನ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದರ ಜೊತೆಗೆ ಚಳಿಯ ತೀವ್ರತೆಯು ಹೆಚ್ಚಿರಲಿದೆ. (weather) (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಜಿಲ್ಲೆಯಲ್ಲಿಯು ಥಂಡಿ ಜೋರಿದೆ. ಕಳೆದ ರಾತ್ರಿ ಶಿವಮೊಗ್ಗ ನಗರದಲ್ಲಿ ಚಳಿ ಪ್ರಮಾಣ ಕಡಿಮೆ ಇತ್ತು. ಆದರೆ ತಡರಾತ್ರಿ ಮತ್ತು ಬೆಳಗಿನ ಜಾವದ ಹೊತ್ತಿಗೆ ಥಂಡಿ ಹೆಚ್ಚಾಗಿದೆ. ಇವತ್ತು ಬಿಸಿಲಿನ ಅಬ್ಬರ ಮುಂದುವರೆಯಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
