ಶಿವಮೊಗ್ಗ ಜಿಲ್ಲೆಯ ಒಂದು ತಾಲೂಕಿನಲ್ಲಿ ಭಾರಿ ಮಳೆಯ ಮುನ್ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER NEWS, 13 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇವತ್ತು ಹಲವು ಕಡೆ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದೆಡೆ ಕಳೆದ ಮೂರ್ನಾಲ್ಕು ದಿನದಿಂದ ನಿರಂತರ ಮಳೆ ಹಿನ್ನೆಲೆ ತಾಪಮಾನ ತುಸು ತಗ್ಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವತ್ತು ಭಾರಿ ಮಳೆಯಾಗುವ ಸಂಭವವಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇನ್ನು, ಈ ತಾಲೂಕುಗಳಲ್ಲಿ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆ, ಮೆರಗು ಹೆಚ್ಚಿಸಿದ ಕಲಾ ತಂಡಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment