ಶಿವಮೊಗ್ಗ ಲೈವ್
ಹವಾಮಾನ ವರದಿ: ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದ್ದು ಮತ್ತೆ ಬಿಸಿಲಿನ ಅಬ್ಬರ ಶುರುವಾಗಿದೆ. ಇದರಿಂದ ತಾಪಮಾನ ಕೂಡ ತುಸು ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆಯಿಂದ ಬೆಳಗಿನ ಜಾವದ ತನಕ ಇಬ್ಬನಿ ಬೀಳುತ್ತಿದೆ. ಆ ಬಳಿಕ ಬಿಸಿಲು ಹೆಚ್ಚಳವಾಗುತ್ತಿದೆ (Weather).
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ದುರ್ಗಿಗುಡಿಯಲ್ಲಿ ಮೂರು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಸಾವು
