ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 15 OCTOBER 2024 : ಮೋಡ ಕವಿದ ವಾತಾವರಣ ಮತ್ತು ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಉಷ್ಣಾಂಶ ತಗ್ಗಿದೆ. ಎಲ್ಲೆಡೆ ತಂಪು ವಾತಾವರಣ ಇದೆ. ಇನ್ನು ಮೂರ್ನಾಲ್ಕು ದಿನ ಮೋಡ ಮತ್ತು ಭಾರಿ ಮಳೆ ಇರಲಿದೆ. ಹಾಗಾಗಿ ಜಿಲ್ಲೆಯಲ್ಲಿ ತಾಪಮಾನ ಮತ್ತಷ್ಟು ತಗ್ಗಲಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ, ಆಗಾಗ ಮಳೆಯಾಗಲಿದೆ. ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ. ಅಲ್ಲಲ್ಲಿ ಮಳೆ. ಮಧ್ಯಾಹ್ನ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆ ಸಾಧ್ಯತೆ.

ಇದನ್ನೂ ಓದಿ » ಅಡಿಕೆ ಧಾರಣೆ | 14 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇಡೀ ದಿನ ಮೋಡ ಕವಿದ ವಾತಾವರಣ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಗುಡುಗು ಸಹಿತ ಮಳೆ ಸಾಧ್ಯತೆ. ರಾತ್ರಿ ಮೋಡ ಕವಿದ ವಾತಾವರಣ ಇರಲಿದೆ.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





