ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಕಳೆದ ವಾರ ಜಿಲ್ಲೆಯಲ್ಲಿ ಮೈಕೊರೆಯುವ ಚಳಿ ಇತ್ತು. ಈಗ ಪರಿಸ್ಥಿತಿ ಬದಲಾಗಿದ್ದು ಚಳಿ ಕಡಿಮೆಯಾಗಿದೆ. ಬಿಸಿಲು ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ತಾಪಮಾನದಲ್ಲಿ ತುಸು ಏರಿಕೆಯಾಗಿದೆ. (Weather Report)
ಇದನ್ನೂ ಓದಿ » ಕಿರಾಣಿ ಅಂಗಡಿಗಳ ಮೇಲೆ ಪೊಲೀಸರ ದಾಳಿ, ಮಾಲೀಕರ ವಿರುದ್ದ ಕೇಸ್, ಕಾರಣವೇನು?
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
