ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 JULY 2024

WEATHER REPORT : ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಹೊರತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಕ್ಷೀಣಿಸಿದೆ. ಇನ್ನು, ತಾಪಮಾನದಲ್ಲಿಯು ಏರಿಳಿತವಾಗುತ್ತಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಬೆಳಗ್ಗೆ 7 ಗಂಟೆಗೆ 23.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 24.8 ಡಿಗ್ರಿ, ಬೆಳಗ್ಗೆ 11ಕ್ಕೆ 27.2 ಡಿಗ್ರಿ, ಮಧ್ಯಾಹ್ನ 1ಕ್ಕೆ 28.6 ಡಿಗ್ರಿ, ಮಧ್ಯಾಹ್ನ 3ಕ್ಕೆ 27.3 ಡಿಗ್ರಿ, ಸಂಜೆ 5ಕ್ಕೆ 25.6 ಡಿಗ್ರಿ, ರಾತ್ರಿ 7ಕ್ಕೆ 22.7 ಡಿಗ್ರಿ, ರಾತ್ರಿ 9ಕ್ಕೆ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇನ್ನು, ಇವತ್ತು ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 25 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್.‌ ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಅಗ್ನಿ ಅವಘಡ, ಅಂಗಡಿಗಳು ಆಹುತಿ, ದಟ್ಟ ಹೊಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment