ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 MAY 2024
WEATHER REPORT : ಪಕ್ಕದ ಜಿಲ್ಲೆಗಳಲ್ಲಿ ವಿಪರೀತ ಬಿಸಿಗಾಳಿ ಇದ್ದರು ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಕೊಂಚ ತಗ್ಗಿದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆ ಗ್ರೀನ್ ಜೋನ್‌ನಲ್ಲಿ ಇದೆ. ಪಕ್ಕದ ಹಾವೇರಿಗೆ ರೆಡ್ ಅಲರ್ಟ್, ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ಅಂದಾಜಿಸಲಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ 25.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು. ಬೆಳಗ್ಗೆ 9ಕ್ಕೆ 30 ಡಿಗ್ರಿ, ಬೆಳಗ್ಗೆ 11ಕ್ಕೆ 35.2 ಡಿಗ್ರಿ, ಮಧ್ಯಾಹ್ನ 1ಕ್ಕೆ 39.1 ಡಿಗ್ರಿ, ಮಧ್ಯಾಹ್ನ 3ಕ್ಕೆ 39.7 ಡಿಗ್ರಿ, ಸಂಜೆ 5ಕ್ಕೆ 37.2 ಡಿಗ್ರಿ, ರಾತಿ 10 ಗಂಟೆಗೆ 24.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ರೆಡ್ ಮತ್ತು ಆರೆಂಜ್ ಅಲರ್ಟ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವತ್ತು ವಿಪರೀತ ಬಿಸಿಲು ಇರಲಿದೆ. ಇದೇ ಕಾರಣಕ್ಕೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಪ್ರಕಟಿಸಲಾಗಿದೆ. ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ – ಮಧು, ಕುಮಾರ್ ಮಧ್ಯೆ ‘ರೀಚಾರ್ಜ್’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422