ಬೆಳಗ್ಗೆ ಬಿಸಿಲ ಝಳ, ರಾತ್ರಿ ತಂಪು ತಂಪು ವಾತವರಣ, ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ತಾಪಮಾನ?

WEATHER REPORT, 2 OCTOBER 2024 : ಶಿವಮೊಗ್ಗದ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ. ಇದರಿಂದ ವಾತಾವರಣ ತುಸು ತಂಪೇರಿದಂತಾಗಿದೆ. ಆದರೆ ಬಿಸಿಲಿನ ಝಳವು ಹೆಚ್ಚಿದೆ. ಇದರಿಂದ ತಾಪಾಮಾನ ಏರಿದೆ.

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ‌ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿ‍ಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸಲ್ಸಿಯಸ್‌ ತಾಪಮಾನ ಇರಲಿದೆ.

ಜಿಲ್ಲೆಯ ವಿವಿಧೆಡೆ ಇವತ್ತೂ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ತಂಪು ವಾತಾವರಣ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್‌ ಸಂಗ್ರಹ

WEATHER-REPORT-SHIMOGA-

Leave a Comment