ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಥಂಡಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಕುಸಿತ ಕಂಡಿದ್ದು, ಮೈಕೊರೆಯುವ ಚಳಿ ಇದೆ. (Weather)
ಮಳೆ ಸಂಬಂಧ ರಾಜ್ಯಾದ್ಯಂತ ಯಾವುದೇ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಘಾ ಮಳೆ ಅಬ್ಬರವು ಕಡಿಮೆಯಾಗಿದೆ. ತಂಪು ವಾತಾವರಣ ಇದ್ದು, ರಾತ್ರಿ ವೇಳೆ ಚಳಿ ತೀವ್ರವಾಗಿದೆ.
ಎಲ್ಲೆಲ್ಲಿ ಹೇಗಿದೆ ತಾಪಮಾನ?

- ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Shivamogga Weather report
