ಶಿವಮೊಗ್ಗದ ಹವಾಮಾನ | 22 ಮೇ 2025 | ಮುಂದುವರೆದ ಮಳೆ, ತಗ್ಗಿದ ಧಗೆ, ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇವತ್ತು ಗುಡುಗು, ಮಿಂಚು, ಜೋರು ಮೇಲ್ಮೈ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. (Weather Report)➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆ ಆಗಿದೆ. ತಂಪು ವಾತಾವರಣ ಇದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

JNNCE-ADMISSION-2025-26

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?

Leave a Comment