ದೀಪಾವಳಿ ಸಂಭ್ರಮದ ಮಧ್ಯೆ ಮಲೆನಾಡಲ್ಲಿ ಮಳೆ ಅಬ್ಬರ – ಇಲ್ಲಿದೆ ಶಿವಮೊಗ್ಗದ ಇವತ್ತಿನ ಹವಾಮಾನ ವರದಿ

 ಶಿವಮೊಗ್ಗ  LIVE 

ಹವಾಮಾನ ವರದಿ: ದೀಪಾವಳಿ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಿದೆ. ಮಂಗಳವಾರ ಜಿಲ್ಲೆಯಾದ್ಯಂತ ಮಳೆಯಾಗಿದೆ. ಕಳೆದ ರಾತ್ರಿ ಬಹು ಹೊತ್ತು ಮಳೆ ಸುರಿದಿದ್ದು, ಇವತ್ತೂ ವರ್ಷಧಾರೆಯ ನಿರೀಕ್ಷೆ ಇದೆ. (Weather)

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಕೆಲವು ಜಿಲ್ಲೆಗಳಿಗೆ ಇವತ್ತು ಅಲರ್ಟ್‌ ಪ್ರಕಟಿಸಲಾಗಿದೆ. ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಪ್ರಕಟಿಸಿದೆ. ಈ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ನಿರೀಕ್ಷೆ ಇದೆ.

Sigandur-Janthre-2026-scaled.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ದೀಪಾವಳಿ ಮೆರಗು ಹೆಚ್ಚಿಸಿದ ಅಂಟಿಗೆ ಪಂಟಿಗೆ

Shimoga Weather Report

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment