ಅಕ್ಕಪಕ್ಕದ ಜಿಲ್ಲೆಗೆ ಯಲ್ಲೋ ಅಲರ್ಟ್‌, ಶಿವಮೊಗ್ಗದಲ್ಲಿ ಹೇಗಿರುತ್ತೆ ವಾತಾವರಣ?

WEATHER REPORT, 23 OCTOBER 2024 : ಕಳೆದ ಎರಡು ದಿನ ಅಬ್ಬರಿಸಿದ್ದ ವರುಣ ಈಗ ಮರೆಯಾಗಿದ್ದಾನೆ. ಶಿವಮೊಗ್ಗದಲ್ಲಿ ಪುನಃ ಬಿಸಿಲು ಕಾಣಿಸಿಕೊಂಡಿದೆ. ಆದರೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇನ್ನು, ಇವತ್ತು ಶಿವಮೊಗ್ಗ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಇದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.

ಯಾವ್ಯಾವ ತಾಲೂಕಿನಲ್ಲಿ ಹೇಗಿದೆ ವಾತಾವರಣ?

♦ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಆಗಾಗ ಮಳೆಯಾಗುವ ಸಾಧ್ಯತೆ ಇದೆ.

WEATHER-REPORT-SHIMOGA-

♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಅಡಿಕೆ ಧಾರಣೆ | 22 ಅಕ್ಟೋಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಅಥವಾ ಸಾಧಾರಣ ಮಳೆಯಾಗುವ ಸಂಭವವಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment