ಇವತ್ತು ಇಡೀ ಕರ್ನಾಟಕಕ್ಕೆ ಅಲರ್ಟ್‌, ಶಿವಮೊಗ್ಗದಲ್ಲಿ ಹೇಗಿರುತ್ತೆ ವಾತಾವರಣ? – ಹವಾಮಾನ ವರದಿ

 ಶಿವಮೊಗ್ಗ  LIVE 

ಹವಾಮಾನ ವರದಿ: ರಾಜ್ಯದ್ಯಂತ ಇವತ್ತೂ ಮಳೆ ಅಲರ್ಟ್‌ ಮುಂದುವರೆದಿದೆ. ಕರಾವಳಿ ಭಾಗದ ಎರಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. (Weather)

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಜೋರು ಮಳೆಯಾಗಿದೆ. ಇವತ್ತು ಯಲ್ಲೋ ಅಲರ್ಟ್‌ ಇದ್ದು ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದ್ದು ಆ ಭಾಗಕ್ಕೆ ಹೊಂದಿಕೊಂಡಿರವ ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಭಾರಿ ಮಳೆ ಆಗಬಹುದಾಗಿದೆ.

Sigandur-Janthre-2026-scaled.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್‌ ಆಟೋ ಕೌಂಟರ್‌, ಹೇಗಿದೆ ವ್ಯವಸ್ಥೆ?

Weather

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment