ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಈಗಾಗಲೇ ಹಾವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 9 ಗಂಟೆಗೆ 23.8 ಡಿಗ್ರಿ, ಮಧ್ಯಾಹ್ನ 12ಕ್ಕೆ 25.6 ಡಿಗ್ರಿ, ಮಧ್ಯಾಹ್ನ 3ಕ್ಕೆ 26.4 ಡಿಗ್ರಿ, ಸಂಜೆ 5ಕ್ಕೆ 25.4 ಡಿಗ್ರಿ, ರಾತ್ರಿ 8ಕ್ಕೆ 23.1 ಡಿಗ್ರಿ, ರಾತ್ರಿ 10ಕ್ಕೆ 22.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ವಿದ್ಯಾನಗರದಲ್ಲಿ ಬೆಳಗ್ಗೆ ವೈನ್ ಶಾಪ್ ಬಾಗಿಲು ತೆಗೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್, ಆಗಿದ್ದೇನು?
ಬೆಳಗ್ಗೆಯಿಂದಲೆ ಯಲ್ಲೋ ಅಲರ್ಟ್
ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ‘ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ರಾಯಚೂರು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗಲಿದೆʼ ಎಂದು ಬೆಳಗ್ಗೆ 7.30ಕ್ಕೆ ಅಲರ್ಟ್ ಘೋಷಿಸಲಾಗಿದೆ.