ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾಗಿದೆ. ಆದರೂ ಹವಾಮಾನ ಇಲಾಖೆ ಇವತ್ತು ಇಡೀ ರಾಜ್ಯಕ್ಕೆ ಯಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇವತ್ತು ಯಾವುದೆ ಅಲರ್ಟ್ ಇಲ್ಲ. (weather)
ಶಿವಮೊಗ್ಗ ಜಿಲ್ಲೆಯಲ್ಲಿಯು ರಾತ್ರಿ ವೇಳೆ ಮಳೆ ಅಬ್ಬರಿಸುತ್ತಿದೆ. ಇವತ್ತು ಅಲ್ಲಲ್ಲಿ ಸಾಧಾರಣದಿಂದ ಜೋರು ವರ್ಷಧಾರೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕ್ರಿಕೆಟರ್ ಮಯಾಂಕ್, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಅರ್ಜುನ್ ತೆಂಡೂಲ್ಕರ್ ಪ್ರಾಕ್ಟೀಸ್
shimoga weather