ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣ, ಉಳಿದ ತಾಲೂಕುಗಳಲ್ಲಿ ಬರುತ್ತಾ ಮಳೆ? ಇಲ್ಲಿದೆ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MAY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಂಪು ಮತ್ತು ಮೋಡ ಕವಿದ ವಾತಾವರಣ ಇರಲಿದೆ. ಆದರೆ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನು ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಯಸ್‌ ಇರಲಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 9ಕ್ಕೆ 24.7 ಡಿಗ್ರಿ, ಬೆಳಗ್ಗೆ 11ಕ್ಕೆ 27.1 ಡಿಗ್ರಿ, ಮಧ್ಯಾಹ್ನ 12ಕ್ಕೆ 27.4 ಡಿಗ್ರಿ, ಮಧ್ಯಾಹ್ನ 3ಕ್ಕೆ 26.8 ಡಿಗ್ರಿ, ಸಂಜೆ 6ಕ್ಕೆ 24.6 ಡಿಗ್ರಿ, ರಾತ್ರಿ 10 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗಲಿದೆ. ಸಾಗರ, ಹೊಸನಗರ, ಶಿಕಾರಿಪುರ ಮತ್ತು ಸೊರಬದಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್.‌ ಸಾಧಾರಣ ಮಳೆಯಾಗಲಿದೆ. ಭದ್ರಾವತಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಯಸ್‌ ಇರಲಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment