ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ, ಇವತ್ತೂ ಅಲರ್ಟ್‌ ಪ್ರಕಟ, ತಗ್ಗಿದ ತಾಪಮಾನ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇನ್ನು, ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report)

ಇವತ್ತು ಯಲ್ಲೋ ಅಲರ್ಟ್‌

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ. ಕರಾವಳಿ ಜಿಲ್ಲೆಗಳ ಜೊತೆಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹೊರತು ರಾಜ್ಯದ ಎಲ್ಲೆಡೆ ಯಲ್ಲೋ ಅಲರ್ಟ್‌ ಇದೆ.

Country-Wise-Data.

ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ?

  • ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.
  • ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.
  • ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ »ಶಿವಮೊಗ್ಗ ಸಿಟಿ ಕೇಸರಿಮಯ, ಗಣೇಶೋತ್ಸವಕ್ಕೆ ಸಿದ್ಧತೆ ಜೋರು, ಎಲ್ಲೆಲ್ಲಿ ಹೇಗಿದೆ?

Weather Report. Yellow Alert in Shivamogga district

WEATHER-REPORT-SHIMOGA-

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment