ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 30 JULY 2024 : ಜಿಲ್ಲೆಯಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ವಿವಿಧೆಡೆ ಸಾಧಾರಣ ಮಳೆಯಾಗುತ್ತಿದೆ. ಮೇಲ್ಮೈ ಗಾಳಿ ಅಬ್ಬರವು ಕಡಿಮೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳೆದ ವಾರ ಮಲೆನಾಡು ಭಾಗದಲ್ಲಿ ಅಬ್ಬರಿಸಿದ್ದ ವರುಣ ಬಿಡುವು ನೀಡಿದ್ದಾನೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಮಳೆ ಕಡಿಮೆಯಾಗಿ ಬಿಸಿಲು ಕಾಣಿಸಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕೃಷಿ ಚಟುವಟಿಕೆ ಬಿರುಸು ಪಡೆದಿದೆ. ಇನ್ನೊಂದೆಡೆ ಹವಾಮಾನ ಇಲಾಖೆಯಿಂದಲು ಶಿವಮೊಗ್ಗ ಜಿಲ್ಲೆಗೆ ಯಾವುದೇ ಅಲರ್ಟ್ ಘೋಷಣೆಯಾಗಿಲ್ಲ.
ಇವತ್ತು ಎಷ್ಟಿದೆ ತಾಪಮಾನ?
ಮಳೆ ಕಡಿಮೆಯಾದ ಬೆನ್ನಿಗೆ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.
ಇದನ್ನೂ ಓದಿ ⇓
ವಿಐಎಸ್ಎಲ್ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ