ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಮೇಲ್ಮೈ ಗಾಳಿ ಇದ್ದು ರಭಸವಾಗಿ ಬೀಸುತ್ತಿದೆ. (Weather Report) (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಇವತ್ತು ಇದೇ ರೀತಿ ವಾತಾವರಣ ಇರಲಿದೆ. ಮಳೆ ಮರೆಯಾಗಿ ಜಿಲ್ಲೆಯಲ್ಲಿ ಬಿಸಿಲು ಕಾಣಿಸಿಕೊಂಡಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ
ಇನ್ನು, ಮೇಲ್ಮೈ ಗಾಳಿ ತೀವ್ರವಾಗಿದೆ. ಖಾಲಿ ಜಾಗಗಳಲ್ಲಿ ಭಾರಿ ಗಾಳಿ ಬೀಸುತ್ತಿದೆ. ಇದರಿಂದಾಗಿ ಅಲ್ಲಲ್ಲಿ ಮರಗಳು, ರೆಂಬೆಗಳು ತುಂಡಾಗಿ ಬೀಳುತ್ತಿವೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್, ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

Shivamogga Weather Report
