SHIVAMOGGA LIVE NEWS | 30 NOVEMBER 2024 (ಈ ಸುದ್ದಿಯನ್ನು ಇನ್ನು 42 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಲೆ ಇದೆ. ಇವತ್ತು ಕೂಡ ಮೈಕೊರವೆ ಚಳಿ ಇರಲಿದೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣವು (Weather) ಇರಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲು ಮತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ » ಅಡಿಕೆ ಧಾರಣೆ | 29 ನವೆಂಬರ್ 2024 | ಇವತ್ತು ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?
