ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದೆ. ಇದರ ಬೆನ್ನಿಗೆ ಬಿಸಿಲು ಆವರಿಸಿದೆ. (Weather)
ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವು ದಿನದಿಂದ ಭಾರಿ ಮಳೆಯಾಗಿತ್ತು. ಆದರೆ ಎರಡು ದಿನದಿಂದ ಮಳೆ ಕಡಿಮೆಯಾಗಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಜಿಲ್ಲೆಗೆ ಯಾವುದೇ ಅಲರ್ಟ್ ಪ್ರಕಟಿಸಿಲ್ಲ. ಆದರೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.


ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್ ಚಾಲಕನಿಗೆ ₹10,000 ದಂಡ, ಕಾರಣವೇನು?
