ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 4 OCTOBER 2024 : ಬಿಸಿಲಿನ ಝಳದಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಗುರುವಾರದ ಮಳೆ ತುಸು ತಂಪೆನಿಸಿದೆ. ಇವತ್ತು ಕೂಡ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
» ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಬಿಸಿಲು ಇರಲಿದೆ. ಮೋಡ ಕವಿದ ವಾತಾವರಣವು ಕಾಣಿಸಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಂಭವವು ಇದೆ.
» ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಂಭವವಿದೆ.

» ಸಾಗರ ತಾಲೂಕಿನಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ, ಮಳೆಯಾಗಲಿದೆ.
» ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಎಲ್ಲೆಲ್ಲಿ ಆಗ್ತಿದೆ ವರ್ಷಧಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





