ಶಿವಮೊಗ್ಗದಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಮಳೆಯಾಗುತ್ತಾ?

WEATHER REPORT, 4 OCTOBER 2024 : ಬಿಸಿಲಿನ ಝಳದಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಗುರುವಾರದ ಮಳೆ ತುಸು ತಂಪೆನಿಸಿದೆ. ಇವತ್ತು ಕೂಡ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

» ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವತ್ತು ಬಿಸಿಲು ಇರಲಿದೆ. ಮೋಡ ಕವಿದ ವಾತಾವರಣವು ಕಾಣಿಸಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಂಭವವು ಇದೆ.

» ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಂಭವವಿದೆ.

WEATHER-REPORT-SHIMOGA-

» ಸಾಗರ ತಾಲೂಕಿನಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ, ಮಳೆಯಾಗಲಿದೆ.

» ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆ ಇದೆ.     

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಎಲ್ಲೆಲ್ಲಿ ಆಗ್ತಿದೆ ವರ್ಷಧಾರೆ?

Leave a Comment