ಶಿವಮೊಗ್ಗದಲ್ಲಿ ಇವತ್ತು ಹೇಗಿರತ್ತೆ ವಾತಾವರಣ? ಹವಾಮಾನ ಇಲಾಖೆ ವರದಿಯಲ್ಲಿ ಏನಿದೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರವು ಮಳೆಯಾಗಿದೆ. ಆದರೆ ಇವತ್ತು ಯಾವುದೇ ಅಲರ್ಟ್‌ ಇಲ್ಲ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. (Weather Report)

ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಇವತ್ತು ಬಿಸಿಲು ಆವರಿಸುವ ಸಾಧ್ಯತೆ ಇದೆ. ಸಂಜೆ ವೇಳೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Prashanth-Loan-Advertisement.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Weather Report

WEATHER-REPORT-SHIMOGA-

Leave a Comment