ಶಿವಮೊಗ್ಗದಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

WEATHER REPORT, 7 DECEMBER 2024

ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇವತ್ತು ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದ್ದು ಧಗೆ ಹೆಚ್ಚಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಅಡಿಕೆ ಧಾರಣೆ | 6 ಡಿಸೆಂಬರ್‌ 2024 | ಶಿವಮೊಗ್ಗ, ಭದ್ರಾವತಿಯಲ್ಲಿ ಎಷ್ಟಿದೆ ಅಡಿಕೆ ರೇಟ್‌?

Leave a Comment