WEATHER REPORT, 8 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಇವತ್ತೂ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಝಳ ಕೂಡ ಹೆಚ್ಚಾಗಿದೆ. ಇದರಿಂದ ತಾಪಮಾನ ಏರಿಕೆಯಾಗಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ತಾಲೂಕುವಾರು ತಾಪಮಾನ, ವಾತಾವರಣ
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
» ತೀರ್ಥಹಳ್ಳಿ ತಾಲೂಕಿನಲ್ಲಿ ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಧಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ. ಸಂಜೆ ವೇಳೆಗೆ ಮಳೆಯಾಗುವ ಸಂಭವವಿದೆ.
» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಂಜೆ ವೇಳಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ
