ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 16 MAY 2024
RAINFALL REPORT : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಪೂರ್ವ ಮುಂಗಾರು ಮಳೆ ಮತ್ತಷ್ಟು ಬಿರುಸಾಗಲಿದೆ. ಇನ್ನು ನಾಲ್ಕು ದಿನ ಮಳೆಯಾಗಲಿದೆ. ಇನ್ನೊಂದೆಡೆ ರಾಜ್ಯದಲ್ಲಿ ಇವತ್ತು ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಯಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ. ಈ ಅವಧಿಯಲ್ಲಿ ಒಟ್ಟು 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಇರಲಿದೆ. ಇನ್ನು, ಇವತ್ತು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್
ತಾಪಮಾನ 2 ಡಿಗ್ರಿ ಇಳಿಕೆ
ಇನೊಂದೆಡೆ ಪೂರ್ವ ಮುಂಗಾರು ಬಿರುಸಾಗುತ್ತಿರುವುದರಿಂದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಇಳಿಕೆಯಾಗುತ್ತಿದೆ. ಮಳೆ ಮುಂದುವರೆದಂತೆ ಮುಂದಿನ ಎರಡು ದಿನದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಉಷ್ಣಾಂಶ ಇಳಿಕೆಯಾಗುವ ಸಂಭವವಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಇಳಿಕೆಯಾಗಲಿದೆ.






