ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಬಿಳಿ ನಂಬರ್ ಬೋರ್ಡ್ ಇರುವ ಕಾರುಗಳನ್ನು ಕಾನೂನು ಬಾಹಿರವಾಗಿ ಬಾಡಿಗೆಗೆ ಓಡಿಸಲಾಗುತ್ತಿದೆ. ಇಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ಬಿಳಿ ನಂಬರ್ ಬೋರ್ಡ್ ಇರುವ ವೈಯುಕ್ತಿಕ ಒಡೆತನದ ಕಾರುಗಳಲ್ಲಿ, ಕಾನೂನು ಬಾಹಿರವಾಗಿ ಬಾಡಿಗೆ ಒಪ್ಪಂದ ಮೇರೆಗೆ ಜನರನ್ನು ಕರೆದೊಯ್ಯುಲಾಗುತ್ತಿದೆ. ಇಂತಹ ವಾಹನಗಳನ್ನು ಹಳದಿ ಬಣ್ಣದ ಬೋರ್ಡ್‍ಗೆ ಪರಿವರ್ತಿಸಿಕೊಂಡು ನಿಗದಿತ ತೆರಿಗೆ ಪಾವತಿಸಿ, ಪರವಾನಿಗೆ ಪಡೆದುಕೊಂಡು ಬಾಡಿಗೆಗೆ ಓಡಿಸಬೇಕು ಎಂದು ಆರ್‍ಟಿಒ ಅಧಿಕಾರಿಗಳು ಸೂಚಿಸಿದ್ದಾರೆ.
ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಶಿವಮೊಗ್ಗ ನಗರದಲ್ಲಿ ವ್ಯಾಪಕ ತನಿಖೆ ನಡೆಸುವಂತೆ ಮೋಟಾರು ವಾಹನ ನಿರೀಕ್ಷಕರಿಗೆ ಸೂಚನೆಯನ್ನೂ ನೀಡಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422