ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 NOVEMBER 2022
ಎನ್.ಆರ್.ಪುರ : ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು ಶಿವಮೊಗ್ಗದ ಮಹಿಳೆ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. (woman death)

ಶಿವಮೊಗ್ಗದ ಗೋಪಾಳದ ನಿವಾಸಿ ರತ್ನಮ್ಮ (56) ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮುತ್ತಿನಕೊಪ್ಪ ಸಮೀಪ ಕಿರು ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಎನ್.ಆರ್.ಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಎಂ ಸ್ಯಾಂಡ್ ತುಂಬಿಕೊಂಡ ಟಿಪ್ಪರ್ ಲಾರಿ ಎನ್.ಆರ್.ಪುರದ ಕಡೆಗೆ ತೆರಳುತ್ತಿತ್ತು.
ALSO READ – ಶಿವಮೊಗ್ಗದಲ್ಲಿ KSRTC ಬಸ್, ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ
ಲಾರಿ ಮತ್ತು ಬಸ್ಸು ಏಕಕಾಲಕ್ಕೆ ಕಿರು ಸೇತುವೆ ಮೇಲೆ ನುಗ್ಗಿದ್ದರಿಂದ ಅಪಘಾತ ಸಂಭವಿಸಿದೆ. ಗಾಯಾಗಳುಗಳಿಗೆ ಎನ್.ಆರ್.ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
(woman death)
ಆರು ತಿಂಗಳ ಹಿಂದ ಪಾರಾಗಿದ್ದ ರತ್ನಮ್ಮ
ಗೋಪಾಳದ ರತ್ನಮ್ಮ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ
ಸಂರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದಿಂದ ಪ್ರತಿದಿನ ಬಸ್ಸಿನಲ್ಲಿ ಅಲ್ಲಿಗೆ ತೆರಳುತ್ತಿದ್ದರು. ಆರು ತಿಂಗಳ ಹಿಂದೆ ಶಿವಮೊಗ್ಗ ಎನ್.ಆರ್.ಪುರ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತದ ಸಂಭವಿಸಿತ್ತು. ಆ ಅಪಘಾತದಲ್ಲಿ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಈಗ ಅದೆ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ರತ್ನಮ್ಮ ಮೃತಪಟ್ಟಿದ್ದಾರೆ.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





